Saturday, December 06, 2025
Menu

ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ

dk shivakumar

ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಮಾಧ್ಯಮದಗಳ ಜೊತೆ ಮಾತನಾಡಿದ ಅವರು, ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ ಚಾರ್ಜ್​​ಶೀಟ್ ಹಾಕಿರುವುದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಅವರಿಗೆ ಇ.ಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ಡಿಸೆಂಬರ್ 19ನೇ ತಾರೀಕಿನ ಒಳಗೆ ಮಾಹಿತಿ ನೀಡಬೇಕು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದರು.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ

ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್​​ಎ ಪ್ರಕರಣವನ್ನು ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜೊತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದು ಡಿಸಿಎಂ ಕಿಡಿಕಾರಿದರು.

ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇ.ಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟಕಾಲದಲ್ಲಿ ಇದ್ದಾಗ ನಮ್ಮ ಟ್ರಸ್ಟ್​​​ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕ ಜನರು ಸಹಾಯ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.

Related Posts

Leave a Reply

Your email address will not be published. Required fields are marked *