Tuesday, February 03, 2026
Menu

ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್‌ಗೆ ಇಡಿ ನೋಟಿಸ್‌

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ.

ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು.

ಹಗರಣಕ್ಕೆ ಸಂಬಂಧಿಸಿದಂತೆ ಇಡಿ 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟ್​ಗಳು ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಪ್ರಾಪರ್ಟಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಜಯರಾಮ್​, ರಾಕೇಶ್​ ಪಾಪಣ್ಣ ರಿಯಲ್​ ಎಸ್ಟೇಟ್​ ಉದ್ಯಮಿಗಳಾಗಿದ್ದು, ಮಂಜುನಾಥ್​ ಹಾಗೂ ತೇಜಸ್​ ಎಂದುವವರಿಗೆ ಸೇರಿದ ಆಸ್ತಿ ಜಪ್ತಿ ಮಾಡಲಾಗಿತ್ತು. ಈ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್​ ಮತ್ತು ದಿನೇಶ್​ ಆಸ್ತಿ ಕೂಡ ಜಪ್ತಿ ಮಾಡಿದೆ.

Related Posts

Leave a Reply

Your email address will not be published. Required fields are marked *