ಮಾಜಿ ಸಚಿವರ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ

ಬೆಂಗಳೂರು, ಆ 5  ಮಾಜಿ ಸಚಿವರಾದ ಜಮೀರ್ ಅಹಮದ್ ಖಾನ್ ಹಾಗೂ ರೋಷನ್ ಬೇಗ್ ಅವರುಗಳ ನಿವಾಸ, ಕಚೇರಿ ಮೇಲೆ ಗುರುವಾರ ಮುಂಜಾನೆ ಇಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಇದರ ಜೊತೆಗೆ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೂ ದಾಳಿ ನಡೆದಿದೆ ಎಂದೂ ವರದಿಯಾಗಿದೆ.
ಶಿವಾಜಿನಗರದಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರು ಈ ಹಿಂದೆ ಸರ್ಕಾರಕ್ಕೆ ಅನುಮತಿ ಕೋರಿದ್ದರು.
ಇದೀಗ ಇಡಿ ಅಧಿಕಾರಿಗಳು ದಾಳಿ ಮಾಡಿ ಆಘಾತ ನೀಡಿದ್ದಾರೆ.2018ರಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಅವರನ್ನು ಸಿಬಿಐ ನವೆಂಬರ್ 22ರಂದು ಬಂಧಿಸಿತ್ತು. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ಅವರಿಂದ 400 ಕೋಟಿ ರೂ ಲಂಚ ಪಡೆದ ಆರೋಪ ಎದುರಿಸತ್ತಿದ್ದಾರೆ. ರೋಷನ್ ಬೇಗ್ ಅವರಿಗೆ ಸೇರಿದ ನಿವಾಸ ಸೇರಿದಂತೆ ಒಟ್ಟು 6 ಕಡೆ ದಾಳಿ ಇಡಿ ಅಧಿಕಾರಿಗಳು ನಡೆಸಿದ್ದಾರೆ ಎಂಬ ಮಾಹಿತಿ ದೊರಕಿದೆ.

, , ,

Leave a Reply

Your email address will not be published. Required fields are marked *