ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ನಾಳೆ ಪ್ರಕಟವಾಗಲಿದ್ದು, ಈಗಾಗಲೇ ಡಿಆರ್ ಐ ಅಲ್ಲದೇ ಸಿಬಿಐ ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದರ ನಡುವೆ ಇದೀಗ ಜಾರಿ ನಿರ್ದೇಶನಾಲಯ ಕೂಡ ತನಿಖೆಗೆ ಮುಂದಾಗಿದೆ.
ಗುರುವಾರ ಬೆಳಿಗ್ಗೆ ರನ್ಯಾ ರಾವ್ ಅವರ ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿ ಅಪಾರ್ಟ್ ಮೆಂಟ್ ಮನೆ ಮೇಲೆ ದಾಳಿ ಮಾಡಿದ ನಾಲ್ವರು ಇಡಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ.
ಇದೇ ವೇಳೆ ರನ್ಯಾ ಪತಿ ಜತಿನ್ ಅವರ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯ ಮೇಲೆ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.