ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ನಾಗಪುರ- ರಾಯ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ.
ಪಿಂಪಲ್ಗಾಂವ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರನ್ನು ತಕ್ಷಣವೇ ಸಕೋಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


