ಏಕನಾಥ್ ಶಿಂಧೆ ಸರ್ಕಾರಕ್ಕೆ ಠಾಕ್ರೆ ತಂಡದಿಂದ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಸವಾಲು

ಮುಂಬೈ:ಜುಲೈ 08 ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತೊಂದು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಏಕನಾಥ್ ಶಿಂಧೆ ಅವರನ್ನು ಆಹ್ವಾನಿಸಿದ ರಾಜ್ಯಪಾಲ ಭಗತ್ ಸಿಂಗ್ ನಿರ್ಧಾರದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಶಿಂಧೆ ಸೋಮವಾರ ಬಹುಮತ ಸಾಬೀತು ಪಡಿಸಿದ ಬಳಿಕ ನಡೆದ ವಿಧಾನಸಭೆ ಕಲಾಪಗಳನ್ನೂ ಅವರು ಪ್ರಶ್ನಿಸಿದ್ದಾರೆ. ಅನರ್ಹತೆ ಪ್ರಕ್ರಿಯೆ ಬಾಕಿಯಿರುವ 16 ಬಂಡಾಯ ಶಾಸಕರು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಠಾಕ್ರೆ ಟೀಂ ವಾದಿಸಿದೆ.

ಜೂನ್ 30 ರಂದು ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮತ್ತು ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಾಲ್ಕು ದಿನಗಳ ನಂತರ ಅವರ ಪಾಳಯವು 288 ಸದಸ್ಯರ ಅಸೆಂಬ್ಲಿಯಲ್ಲಿ 164 ಮತಗಳನ್ನು ಪಡೆದರು.

, , ,

Leave a Reply

Your email address will not be published. Required fields are marked *