ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅನಾರೋಗ್ಯದಿಂದ ಬೇಸತ್ತು ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈಶ್ವರ್ ಆಚಾರ್ಯ ಹಾಗೂ ಗೌರಿ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂ ಶುಗರ್ ಹಾಗೂ ಬಿಪಿಯಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಇದರಿಂದ ಬೇಸತ್ತು ಜ್ಯೂಸ್‌ಗೆ ವಿಷ ಬೆರಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಬಸವೇಶ್ವರ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶಿಲನೆ ನಡೆಸಿದ್ದಾರೆ.
ಮಗನ ಅಂತ್ಯಕ್ರಿಯೆ ವೇಳೆ ತಾಯಿ ಸಾವು
ಧಾರವಾಡ ನಗರದ ರಾಜೀವ್ ಗಾಂಧಿನಗರದ ನಿವಾಸಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೆಹಬೂಬ್ ಸಾಬ್ ನದಾಫ್ (47) ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂಜೆ ಮೆಹಬೂಬ್ ಶವ ಸಂಸ್ಕಾರಕ್ಕೆ ಸಿದ್ಧತೆ ನಡೆದಿತ್ತು.
ಸಂಜೆ ಮೆಹಬೂಬ್ ಅಂತ್ಯಕ್ರಿಯೆ ಮಾಡಲು ಮೃತದೇಹ ತೆಗೆದುಕೊಂಡು ಹೋಗುತಿದ್ದಂತೆ ತಾಯಿ ಮುಗುಟಬಿ ನದಾಫ್ (68) ಮೃತಪಟ್ಟಿದ್ದಾರೆ. ಮಗನ ಅಂತ್ಯಕ್ರಿಯೆ ಮುಗಿಸಿ ಬಂದು ಸಂಬಂಧಿಕರು ಹಾಗೂ ಸ್ಥಳೀಯರು ತಡ ರಾತ್ರಿ ತಾಯಿಯ ಅಂತ್ಯಕ್ರಿಯೆಯನ್ನೂ ನೆರವೇರಿಸಿದ್ದಾರೆ.


