Menu

ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ವೃದ್ಧ ಬಲಿ

dog bite

ಬೆಂಗಳೂರು: ಬೀದಿನಾಯಿಗಳ ದಾಳಿಗೆ ವದ್ಧರೊಬ್ಬರು ಮೃತಪಟ್ಟ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, 71 ವರ್ಷದ ಸೀತಪ್ಪ ಎಂಬುವವರು ಸಾವನ್ನಪ್ಪಿದ್ದಾರೆ.

ಸೀತಪ್ಪ ಸೋಮವಾರ ಬೆಳಗ್ಗೆ ವಾಕಿಂಗ್​ಗೆ ಹೋಗುತ್ತಿದ್ದಾಗ 8 ರಿಂದ 9 ಬೀದಿನಾಯಿಗಳು ದಾಳಿ ಮಾಡಿದ್ದು, ಕೈ, ಕಾಲಿನ ಅರ್ಧ ಮಾಂಸವನ್ನೇ ಕಚ್ಚಿ ತಿಂದಿವೆ. ಅಷ್ಟೇ ಅಲ್ಲದೆ ಮುಖಕ್ಕೂ ಕಚ್ಚಿವೆ.

ಗಂಭೀರವಾಗಿ ಗಾಯಗೊಂಡಿದ್ದ ಸೀನಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನಾಯಿ ಕಡಿತ ಕೇಸ್​ಗಳಲ್ಲಿ ತುಮಕೂರು ಮೊದಲನೇ ಸ್ಥಾನದಲ್ಲಿ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ಅಟ್ಯಾಕ್​ ಮಾಡಿವೆ. ಹೀಗಾಗಿ ನಾಯಿಗಳಿಗೆ ಊಟ ನೀಡದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಬಿಬಿಎಂಪಿಯ ಬಾಡೂಟ ಪ್ಲ್ಯಾನ್​ ಜಾರಿಗೂ ಮೊದಲೇ ಅಟ್ಟಹಾಸ ಮೆರೆದಿರುವ ಬೀದಿನಾಯಿಗಳು ಓರ್ವ ವ್ಯಕ್ತಿಯನ್ನ ಬಲಿ ಪಡೆದಿರುವುದು ದುರ್ದೈವ.

Related Posts

Leave a Reply

Your email address will not be published. Required fields are marked *