Wednesday, February 18, 2026
Menu

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ಕ್ಕೆ ಚುನಾವಣೆ

ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು ರಾಜ್ಯಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.

ಏಪ್ರಿಲ್‌ನಲ್ಲಿ ಈ 37 ರಾಜ್ಯಸಭೆಯ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಬಿಹಾರ ಸೇರಿದಂತೆ 10 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.

2026 ರ ಫೆಬ್ರವರಿ 26 ರಂದು ಚುನಾವಣಾ ಆಯೋಗ ಅಧಿಸೂಚನೆಗಳನ್ನು ಹೊರಡಿಸುವುದರೊಂದಿಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಮತದಾನದ ದಿನವೇ ಮತ ಎಣಿಕೆ ನಡೆಯಲಿದೆ.

Related Posts

Leave a Reply

Your email address will not be published. Required fields are marked *