ಭಾರತೀಯ ವಾಯುಪಡೆಯು ಉಗ್ರರ ನೆಲೆಗಳ ಮೇಲೆ ನಡೆಸಿದ`ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನ ಕಂಗಾಲಾಗಿದ್ದು, ಅಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಪ್ರತೀಕಾರ ತೀರಿಸಿಕೊಳ್ಳುತ್ತೇವೆ, ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ ಎಂದರಲ್ಲದೇ ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರು ಇರುವವರೆಗೂ ಹೋರಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಎರಡೂ ದೇಶಗಳ ಮಧ್ಯೆ ವ್ಯಾಪಾರ ವಹಿವಾಟು, ಸಾರಿಗೆ ಸ್ಥಗಿತಗೊಂಡಿದೆ.
ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮಂಗಳವಾರ ತಡ ರಾತ್ರಿ `ಆಪರೇಷನ್ ಸಿಂಧೂರ’ಕಾರ್ಯಾಚರಣೆ ಆರಂಭಿಸಿ, ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದರಲ್ಲಿ 80ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ. ಹೀಗಾಗಿ ಪಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಉಗ್ರರ ಸಾವಿನ ಅಂಕಿ-ಸಂಖ್ಯೆಯನ್ನು ಮುಚ್ಚಿಡಲು ಪಾಕ್ ಪ್ರಯತ್ನಿಸಿದೆ.