Menu

ಯುವಜನತೆಗೆ ಉದ್ಯೋಗ ನಮ್ಮ ಸರ್ಕಾರದ ಬದ್ಧತೆ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಜಾತಿ ಸಮೀಕ್ಷೆಯಿಂದ  ಯಾವ ಸಮುದಾಯಕ್ಕೂ  ಅನ್ಯಾಯುವಾಗಲು  ಬಿಡುವುದಿಲ್ಲ:  ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿದರು.

ಕಾನೂನು ಉಲ್ಲಂಘಿಸಿದರೆ ಬಲಿ: ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಎಚ್ಚರಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿ ದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಎಂದರು.

Related Posts

Leave a Reply

Your email address will not be published. Required fields are marked *