ಶಿವಮೊಗ್ಗದ ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್‌ನಲ್ಲಿ ಈ ದುರಂತ ನಡೆದಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.
ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ.
ಶುಕ್ರವಾರ (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು ಬಿದ್ದಿದ್ದ. ಆತನನ್ನು ಹಾಸ್ಟೆಲ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಗಣೇಶ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಎಂದು ಹಾಸ್ಟೆಲ್‌ನವರು ಹೇಳಿದ್ದಾರೆ.


