ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವಿಗೆ ಪತ್ನಿ ಉಷಾ ಜತೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿಎಂ ಬದಲಾವಣೆ ವಿಚಾರವಾಗಿ ಸಿಎಂ ರೇಸ್ ನಿಂದ ಹೊರ ನಡೆದಿದ್ದದೀರಾ ಎಂಬ ಪ್ರಶ್ನೆಗೆ ಈ ಮೇಲಿನಂತೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು. ನಾನು ನನಗೆ ಏನು ಬೇಕೋ ಪ್ರಾರ್ಥನೆ ಮಾಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನಮಗೆ ಬುದ್ಧವಾದ ಹೇಳಿದ್ದಾರೆ. ಹೈಕಮಾಂಡ್ ಕೂಡ ಕೆಲವು ವಿಚಾರ ಹೇಳಿದೆ. ಇಲ್ಲಿ ರಾಜಕೀಯ ಚರ್ಚೆ ಬೇಡ ಎಂದು ಡಿಸಿಎಂ ಹೇಳಿದರು.
ಎಲ್ಲರ ದುಃಖವನ್ನು ದೂರ ಮಾಡುವ ದೇವಿ ಚಾಮುಂಡಿ. ನಾಡಿನ ಎಲ್ಲರಿಗೂ ಸುಖ ಸಮೃದ್ಧಿ ಕೊಡಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.