ರಿಸರ್ಬ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ಶಶಿಕಾಂತ್ ದಾಸ್ ಅವರನ್ನು ಪ್ರಧಾನಿ ಅವರ ಪ್ರಿನ್ಸಿಪಾಲ್ ಸೆಕ್ರೆಟರಿ ಆಗಿ ನೇಮಕ ಮಾಡಲಾಗಿದೆ.
ಕೇಂದ್ರ ಸಂಪುಟ ನೇಮಕಾತಿ ಸಮಿತಿ ಶನಿವಾರ ಈ ಆದೇಶ ಹೊರಡಿಸಿದ್ದು, ಪ್ರಧಾನಿ ಆರ್ಥಿಕ ಸಲಹೆಗಾರರಲ್ಲಿ ಒಬ್ಬರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದೆ.
ಇದೇ ವೇಳೆ ನೀತಿ ಆಯೋಗದ ಸಿಇಒ ಸುಬ್ರಹ್ಮಣ್ಯಂ ಅವರ ಅಧಿಕಾರಾವಧಿಯನ್ನು ಒಂದು ವರ್ಷದ ಮಟ್ಟಿಗೆ ವಿಸ್ತರಿಸಲಾಗಿದೆ.
1987ರ ಐಎಎಸ್ ಬ್ಯಾಚ್ ನ ಸುಬ್ರಹ್ಮಣ್ಯಂ ಐಎಎಸ್ ಅಧಿಕಾರಿಯಾಗಿ ನಿವೃತ್ತಿಗೊಂಡ ನಂತರ ಕೇಂದ್ರ ನೀತಿ ಆಯೋಗದ ಸಿಇಒ ಆಗಿ 2013ರಲ್ಲಿ ಎರಡು ವರ್ಷದ ಅವಧಿಗೆ ನೇಮಕಗೊಂಡಿದ್ದರು.
ಶಶಿಕಾಂತ್ ದಾಸ್ 2018ರಲ್ಲಿ ಆರ್ ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದು, ೬ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಹಲವಾರು ದಶಕಗಳ ಕಾಲ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸೇವೆ ಸಲ್ಲಿಸಿ ಅಪಾರ ಅನುಭವ ಹೊಂದಿರುವ ಶಶಿಕಾಂತ್ ವಿಶೇಷವಾಗಿ ಆರ್ಥಿಕ, ಹಣಕಾಸು, ತೆರಿಗೆ ಕ್ಷೇತ್ರಗಳಲ್ಲಿ ಹೆಚ್ಚು ಸೇವೆ ಸಲ್ಲಿಸಿದ್ದಾರೆ.