Menu

ಅಬಕಾರಿ ನೀತಿ ಹಗರಣ ಕೇಸ್‌: ಕೇಜ್ರಿವಾಲ್‌ ಸೇರಿ 23 ಆರೋಪಿಗಳ ಖುಲಾಸೆ, ಸಿಬಿಐಗೆ ಕೋರ್ಟ್‌ ತರಾಟೆ

aravind kejriwal

ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಹಾಗೂ ತೆಲಂಗಾಣದ ಎಂಎಲ್‌ಸಿ ಕೆ. ಕವಿತಾ ಸೇರಿದಂತೆ 23 ಆರೋಪಿ ಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಯಾವುದೇ ಸಾಕ್ಷ್ಯಗಳಿಲ್ಲದಿದ್ದರೂ ಈ ನಾಯಕರ ವಿರುದ್ಧ ದೋಷಾರೋಪ ಹೊರಿಸಿದ್ದಕ್ಕಾಗಿ ಸಿಬಿಐ ಕೋರ್ಟ್‌ ತೀವ್ರವಾಗಿ ಖಂಡಿಸಿದೆ.

ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಕೆ. ಕವಿತಾ ಸೇರಿ ಎಲ್ಲಾ 23 ಆರೋಪಿಗಳು ಅಬಕಾರಿ ನೀತಿ ರಚನೆಯಲ್ಲಿ ಕ್ರಿಮಿನಲ್ ಪಿತೂರಿಯಾಗಲಿ ಅಥವಾ ತಪ್ಪು ಮಾಡಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ರೌಸ್ ಅವೆನ್ಯೂ ಕೋರ್ಟ್‌ನ ವಿಶೇಷ ನ್ಯಾಯಾಧೀಶರ ಪೀಠ ಹೇಳಿದೆ.

ಪ್ರಕರಣದಲ್ಲಿ 18ನೇ ಆರೋಪಿ ಎಂದು ಕೇಜ್ರಿವಾಲ್ ಅವರನ್ನು ಪರಿಗಣಿಸಲಾಗಿತ್ತು. ಇವರ ವಿರುದ್ಧದ ಆರೋಪಗಳಿಗೆ ಯಾವುದೇ ಅರ್ಹತೆ ಇಲ್ಲ. ಅಬಕಾರಿ ನೀತಿಯಲ್ಲಿ ಯಾವುದೇ ಪಿತೂರಿಯಾ ಗಲಿ ಅಥವಾ ಕ್ರಿಮಿನಲ್‌ ಉದ್ದೇಶಗಳಾಗಲಿ ಇರಲಿಲ್ಲ ಎಂದು ವಿಶೇಷ ನ್ಯಾಯಾಧೀಶರ ಪೀಠ ಹೇಳಿದೆ.

ಸಿಬಿಐ ಚಾರ್ಜ್‌ಶೀಟ್‌ ಅನೇಕ ದೋಷಗಳಿಂದ ಕೂಡಿದೆ. ಸಿಸೋಡಿಯಾ ವಿರುದ್ಧ ನಾಮಕಾವಸ್ಥೆಗೆ ಪ್ರಕರಣ ದಾಖಲಿಸಲಾಗಿದೆ. ಕೇಜ್ರಿವಾಲ್‌ ವಿರುದ್ಧ ಸಾಕ್ಷ್ಯಾಧಾರಗಳಿಲ್ಲದೆ ಆರೋಪ ಹೊರಿಸಲಾ ಗಿದೆ ಎಂದು ಕೋರ್ಟ್‌ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ.

ಕೋರ್ಟ್‌ ತೀರ್ಪು ಹೊರ ಬೀಳುತ್ತಿದ್ದಂತೆಯೇ ಅರವಿಂದ್‌ ಕೇಜ್ರಿವಾಲ್‌ ಕಣ್ಣೀರಿಟ್ಟಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ 2024 ರಲ್ಲಿ ಚಾರ್ಜ್‌ ಶೀಟ್‌ ಸಲ್ಲಿಸಿತ್ತು. ಆಮ್‌ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿತ್ತು. ಅರವಿಂದ ಕೇಜ್ರಿವಾಲ್ ಅವರನ್ನು 2024ರ ಮಾರ್ಚ್ 21 ರಂದು ಈ ಪ್ರಕರಣದಲ್ಲಿ ಮೊದಲ ಬಾರಿಗೆ ಬಂಧಿಸಲಾಗಿತ್ತು.

Related Posts

Leave a Reply

Your email address will not be published. Required fields are marked *