ಇಂದೇ ಸಂಪುಟ ವಿಸ್ತರಣೆ, ಹೊಸ ಸಚಿವರಿಗೆ ರಾಜಭವನದಲ್ಲಿ ಪ್ರಮಾಣವಚನ

ಬೆಂಗಳೂರು, ಆ 4  ಒಂದು ವಾರದ ಕಸರತ್ತಿನ ನಂತರ,ಸಚಿವ ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಕೂಡಿ ಬಂದಿದ್ದು ಇಂದು ಮಧ್ಯಾಹ್ನ 2-15 ಕ್ಕೆ ನೂತನ ಸಚಿವರು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಚಿವ ಸಂಪುಟದಲ್ಲಿ ಬಿಜೆಪಿ ಉಪಾಧ್ಯಕ್ಷ , ಬಿ. ವೈ . ವಿಜಯೇಂದ್ರ ಯಾವ ಸ್ಥಾನ ಪಡೆಯಲಿದ್ದಾರೆ ಎಂಬುದು ಇನ್ನೂ ಕುತೂಹಲಕಾರಿ ಸಂಗತಿಯಾಗಿದೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರ ಜೊತೆ ಮಾತನಾಡಿ , ಮಧ್ಯಾಹ್ನ ಹೊಸ ಸಚಿವರುಗಳಿಗೆ ರಾಜ್ಯಪಾಲರು ಪ್ರಮಾಣವಚನ ಬೋಧನೆ ಮಾಡಲಿದ್ದಾರೆ 11 ಗಂಟೆಗೆ ನೂತನ ಸಚಿವರ ಪಟ್ಟಿಯನ್ನು ರಾಜಭವನದಿಂದಲೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನಂತರ ಕಳೆದ ಜುಲೈ 28ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಒಬ್ಬರೆ ಪ್ರಮಾಣವಚನ ಸ್ವೀಕರಿಸಿದ್ದರು.

ಒಂದು ವಾರದಿಂದ ಸಂಪುಟ ವಿಸ್ತರಣೆ ಗಾಗಿ ದೆಹಲಿಯಲ್ಲಿ ನಿರಂತರ ಕಸರತ್ತು ನಡೆಸಿದ್ದರು ಪ್ರಮಾಣ ವಚನ ಸಮಾರಂಭ ಕುರಿತು ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ನೂತನ ಸಚಿವರು ಮಧ್ಯಾಹ್ನ 2.15ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಸರಳ ಸಮಾರಂಭ ನಡೆಯಲಿದೆ ಎಂಬುದಾಗಿ ಆಮಂತ್ರಣ ಪತ್ರಿಕೆಯಲ್ಲಿ ತಿಳಿಸಿದೆ.
ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಈಗಾಗಲೇ ದೂರವಾಣಿ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಮೊದಲ ಹಂತದಲ್ಲಿ 22 ರಿಂದ 25 ಶಾಸಕರು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂಭವವಿದೆ ಎನ್ನಲಾಗಿದೆ.

, , ,

Leave a Reply

Your email address will not be published. Required fields are marked *