Menu

ಎಫ್ ಕೆಸಿಸಿಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26: 6 ಸಾವಿರ ಉದ್ಯೋಗಾವಕಾಶ

fkcci

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ – ಎಫ್.ಕೆ.ಸಿ.ಸಿ.ಐ ನಿಂದ ಏ.5 ರ ಶನಿವಾರ “ಎಫ್.ಕೆ.ಸಿ.ಸಿ.ಐ ಉದ್ಯೋಗ ಉತ್ಸವ್ 2025 -26” ಆಯೋಜಿಸಲಾಗಿದೆ.

ಸಂಸ್ಥೆಯ ಸರ್.ಎಂ.ವಿ. ಆಡಿಟೋರಿಯಂನಲ್ಲಿ ನಡೆಯಲಿರುವ ಉದ್ಯೋಗ ಉತ್ಸವಕ್ಕೆ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಚಾಲನೆ ನೀಡಲಿದ್ದಾರೆ. ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಇ.ವಿ. ರಮಣ ರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳದ್ದಾರೆ. ಎಫ್.ಕೆ.ಸಿ.ಸಿ.ಐ ಅಧ್ಯಕ್ಷ ಎಂ.ಕೆ. ಬಾಲಕೃಷ್ಣ, ಕೆ.ಎಸ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕ ಎನ್.ಎಂ. ನಾಗರಾಜ್ ಮತ್ತಿತರರು ಭಾಗವಹಿಸಲಿದ್ದಾರೆ.

ಉದ್ಯೋಗ ಉತ್ಸವದಲ್ಲಿ 6 ವಲಯಗಳಿಂದ 100ಕ್ಕೂ ಅಧಿಕ ಕಂಪೆನಿಗಳು ಪಾಲ್ಗೊಳ್ಳಲಿದ್ದು, 150ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗಿಯಾಗಲಿದ್ದಾರೆ. 6 ಸಾವಿರಕ್ಕೂ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ಎಫ್.ಕೆ.ಸಿ.ಸಿ.ಐ ಕೌಶಲ್ಯ ಅಭಿವೃದ್ಧಿ ಸಮಿತಿ ಚೇರ್ಮನ್ ಬಿ.ಎ. ಅಭಿಷೇಕ್ ತಿಳಿಸಿದ್ದಾರೆ.
ಉದ್ಯೋಗ ಉತ್ಸವದಲ್ಲಿ ಸಂದರ್ಶನದ ಕೌಶಲ್ಯ, ಕಟ್ಟಡದ ಪುನರಾರಂಭ ಮತ್ತು ಇ ಮೇಲ್ ಶಿಷ್ಟಾಚಾರ ಮತ್ತಿತರೆ ವಿಷಯಗಳ ಕುರಿತು ಗೋಷ್ಠಿಗಳನ್ನು ಆಯೋಜಿಸಲಾಗಿದೆ.

Related Posts

Leave a Reply

Your email address will not be published. Required fields are marked *