Menu

ಕಳ್ಳನೋಟು ದಂಧೆ: ತುಮಕೂರಿನಲ್ಲಿ ಆರು ಆರೋಪಿಗಳ ಬಂಧನ

ತುಮಕೂರಿನ ಚಿಕ್ಕನಾಯಕನಹಳ್ಳಿ ಪೊಲೀಸರು ರಾಜ್ಯವ್ಯಾಪಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟಿನ ಜಾಲವನ್ನು ಭೇದಿಸಿ, ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ ಮುದ್ರಣ, ಮಾರಾಟ ಮತ್ತು ಚಲಾವಣೆಯ ಜಾಲವನ್ನು ಪತ್ತೆ ಹಚ್ಚಿದ್ದಾರೆ.

ಹುಳಿಯಾರಿನ ಅಂಗಡಿಯೊಂದರಲ್ಲಿ ಇಬ್ಬರು ಸಿಗರೇಟ್ ಖರೀದಿಸಿ 500 ರೂಪಾಯಿಯ ನಕಲಿ ನೋಟು ನೀಡಿ ಪರಾರಿಯಾಗಿದ್ದರು. ಅಂಗಡಿ ಮಾಲೀಕ ನೀಡಿದ ದೂರು ಆಧರಿಸಿ ತನಿಖೆ ಆರಂಭಿಸಿದ ಹುಳಿಯೂರು ಮತ್ತು ಚಿಕ್ಕನಾಯಕನಹಳ್ಳಿ ಪೊಲೀಸರು ನಕಲಿ ನೋಟು ದಂಧೆಯನ್ನು ಜಾಲಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಲ್ಲಿ ಬೆಂಗಳೂರಿನ ರುದ್ರೇಶ್ ಎಂಬಾತ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರೆ, ಮೈಸೂರಿನ ರವಿ ಮಾರಾಟ ಮಾಡುತ್ತಿದ್ದ. ಅನಂತಪುರದ ಕುಬೇರಪ್ಪ ಹಾಗೂ ಹನುಮಂತಪ್ಪ ಮಧ್ಯವರ್ತಿಗಳಾಗಿದ್ದರು. ನೋಟು ಖರೀದಿಸುತ್ತಿದ್ದ ವೆಂಕಟೇಶ್ ಮತ್ತು ತಿಲಕ್ ಕುಮಾರ್ ಸಾರ್ವಜನಿಕರ ನಡುವೆ ಚಲಾವಣೆ ಮಾಡುತ್ತಿದ್ದರು ಎಂಬುದು ಪತ್ತೆಯಾಗಿದೆ.

ಬಂಧಿತರಿಂದ 00 ರೂ. ಮುಖಬೆಲೆಯ 60ಕ್ಕೂ ಹೆಚ್ಚು ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ವೇಳೆ ರಾಜ್ಯದ ಇತರ ಜಿಲ್ಲೆಗಳಲ್ಲೂ ನೋಟು ಚಲಾವಣೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಇದರ ಹಿಂದೆ ಇರುವ ದೊಡ್ಡ ಜಾಲವನ್ನು ಇನ್ನಷ್ಟು ಪತ್ತೆಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *