ಪೊಲೀಸ್ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆಟೊ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಬಂಧಿತ ಆರೋಪಿ.
ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಬೆದರಿಸಿ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ.
ಆರೋಪಿ ಇಬ್ಬರಿಂದ 12 ಗ್ರಾಂನ ಚಿನ್ನದ ಸರ ಹಾಗೂ 5 ಗ್ರಾಂನ ರಿಂಗ್ ಮತ್ತು 10,000 ರೂ. ಡ್ರಾ ಮಾಡಿಸಿಕೊಂಡು ಪರಾರಿಯಾಗಿದ್ದ. ಪೋಲಿಸ್ ಎಂದು ಹೇಳಿ ಪಾರ್ಕ್‌ನಲ್ಲಿ ಕೂರುವವರಿಂದ ಸುಲಿಗೆ ಮಾಡುತ್ತಿದ್ದ. ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.