Menu

ಕೌಟುಂಬಿಕ ಕಲಹ: ರಾಜಿ ಮಾಡಿಸಲು ಬಂದಿದ್ದ ಮಾವ, ಪತ್ನಿಯ ಕೊಲೆ 

ಹೆಂಡತಿಯ ಮೇಲೆ ಅನುಮಾನ ವ್ಯಕ್ತಪಡಿಸಿ ನಿತ್ಯ ಜಗಳವಾಡುತ್ತಿದ್ದ ಪತಿಯೊಬ್ಬ, ರಾಜಿ ಪಂಚಾಯಿತಿ ಮಾಡಲು ಬಂದಿದ್ದ ಮಾವನೊಂದಿಗೆ ತನ್ನ ಪತ್ನಿಯನ್ನು ಕೂಡ  ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಳ್ಳಾರಿ ನಗರದ ಗುಗ್ಗರಹಟ್ಟಿಯಲ್ಲಿ ನಡೆದಿದೆ.

ನಾಗಲಕ್ಷ್ಮೀ (24) ಹಾಗೂ  ತಂದೆ ಶ್ರೀನಿವಾಸ (48) ಎಂದು  ಕೊಲೆಯಾದವರು.  ತೇಜಾ  ಹಾಗೂ ಆತನ ತಂದೆ ಗುರುಶಂಕರ್  ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಇಬ್ಬರೂ ದೋಬಿ ಕೆಲಸ ಮಾಡಿಕೊಂಡಿರುವವರು  ಎಂದು ತಿಳಿದುಬಂದಿದೆ.

ತೇಜಾ ತನ್ನ ಪತ್ನಿ ನಾಗಲಕ್ಷ್ಮೀ ಮೇಲೆ ಅನುಮಾನ ವ್ಯಕ್ತಪಡಿಸಿ ಆಗಾಗ ಜಗಳವಾಡುತ್ತಿದ್ದ. ಈ ವಿಚಾರವಾಗಿ ರಾಜಿ ಪಂಚಾಯಿತಿ ನಡೆಸಲು ನಾಗಲಕ್ಷ್ಮೀ ಅವರ ತಂದೆ ಶ್ರೀನಿವಾಸ ಮನೆಗೆ ಬಂದಿದ್ದರು. ಈ ವೇಳೆ ಮಾತಿನ ಚಕಮಕಿ ತಾರಕಕ್ಕೇರಿ, ತೇಜಾ ಮತ್ತು ಆತನ ತಂದೆ ಸೇರಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ನಾಗಲಕ್ಷ್ಮೀ ಹಾಗೂ ಶ್ರೀನಿವಾಸ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಘಟನೆಯಿಂದ ಗುಗ್ಗರಹಟ್ಟಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Related Posts

Leave a Reply

Your email address will not be published. Required fields are marked *