ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಕೋವಿಡ್ ಗೆ ಬಲಿ

ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಕೋವಿಡ್ ಗೆ ಬಲಿ

ಬೆಂಗಳೂರು, ಜೂನ್ 11: ದಲಿತ ಕವಿ ಡಾ. ಸಿದ್ದಲಿಂಗಯ್ಯ(67) ಅವರು ನಿಧನರಾಗಿದ್ದಾರೆ. ಕೊರೋನಾ ಸೋಂಕು ತಗುಲಿದ್ದರರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದು, ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದರು.

ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಇಂದು ಸಂಜೆ 4.45ರ ಸುಮಾರಿಗೆ ಸಿದ್ದಲಿಂಗಯ್ಯ ಅವರು ನಿಧನರಾಗಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿದ್ದಲಿಂಗಯ್ಯ ಅವರು ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು.

,

Leave a Reply

Your email address will not be published. Required fields are marked *