ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಚರ್ಚೆ ಕೂತೂಹಲ ಘಟ್ಟ ತಲುಪಿರುವ ಈ ಸನ್ನಿವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಜೆಡಿಎಸ್, ಬಿಜೆಪಿಯ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ತವರಿನಲ್ಲೇ ಭಕ್ತರು ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ.
ಮಂಡ್ಯ ಜಿಲ್ಲೆಯ ಡಿಕೆ ಶಿವಕುಮಾರ್ ಅಭಿಮಾನಿಗಳಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಮುಖಂಡರಾದ ರಾಜು, ವೇಣು ಹಾಗೂ ನಂಜುಂಡಸ್ವಾಮಿ ನೇತೃತ್ವದಲ್ಲಿ ಪೂಜೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೂರಕ್ಕೂ ಹೆಚ್ಚು ಅಭಿಮಾನಿಗಳಿಂದ ತಾಯಿಗೆ ಪೂಜೆ ನೇರವೇರಿಸಿ ಡಿಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಬೇಡಿಕೊಂಡು ಹೀಡುಗಾಯಿ ಹೊಡೆದಿದ್ದಾರೆ.
ಡಿಕೆ ಶಿವಕುಮಾರ್ ಅಭಿಮಾನಿಗಳಿಂದ ಸಾವಿರ ತೆಂಗಿನಕಾಯಿ ಹೊಡೆದು ದೇವರಲ್ಲಿ ಮೊರೆ ಹೋಗಿದ್ದಾರೆ. ಯುವಕರು, ಮಹಿಳೆಯರು, ಮಕ್ಕಳು ಸೇರಿ ನೂರಾರು ಅಭಿಮಾನಿಗಳಿಂದ ಹೀಡುಗಾಯಿ ಸಮರ್ಪಿಸಿದರು. ಡಿಕೆ ಶಿವಕುಮಾರ್ ಪರ ಘೋಷಣೆ ಕುಗಿದ ಅಭಿಮಾನಿಗಳು, ಕಾರ್ಯಕರ್ತರು.
ಡಿಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಆರಕೆ ಮಾಡಿ 1001 ತೆಂಗಿನ ಕಾಯಿಯನ್ನು ಒಡೆದು ಪೂಜೆ ಸಲ್ಲಿಸಿ ಗಮನ ಸೆಳೆದಿದ್ದಾರೆ.


