ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರಿದಿದೆ. ಹಾಸನದಲ್ಲಿ ಹೃದಯಾಘಾತಕ್ಕೆ ಒಬ್ಬರು ಬಲಿಯಾಗಿದ್ದು, ಈ ಮೂಲಕ ಒಂದುವರೆ ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ, ಮೆಣಸಮಕ್ಕಿ ಗ್ರಾಮದಲ್ಲಿ ರೈತರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಲಕ್ಷ್ಮಣ (52) ಹೃದಯಾಘಾತಕ್ಕೆ ಬಲಿಯಾದ ರೈತ. ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹಿಂದಿರುಗಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ಕೂಡಲೇ ತುರ್ತು ಚಿಕಿತ್ಸಾ ವಾಹನ ಕರೆಸಿದ್ದು, ಮನೆಯ ಬಳಿ ಬರುವಷ್ಟರಲ್ಲಿ ಮೃತಪಟ್ಟ ಲಕ್ಷ್ಮಣ ಅಸು ನೀಗಿದ್ದಾರೆ.
ಭಾನುವಾರ ಹಾಸನದಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ರೈತರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೊರಬ ಹಿರೇಶಕುನ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಕೃಷ್ಣಮೂರ್ತಿ ಶಿಗ್ಗಾದ್ (62) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರೇಶಕುನದ ಹೊಲದಲ್ಲಿ ಕೆಲಸ ಮಾಡು ತ್ತಿರುವಾಗ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.