Wednesday, September 23, 2026
Menu

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪಲ್ಟಿಯಾಗಿ ತಂದೆ, ಮಗ ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮಂಡ್ಯ ಕೋಣನಹಳ್ಳಿ ಬಳಿಯ ಸೇತುವೆಯ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿರಣ್(40) ಮತ್ತು ಮಗ ಕಿಶೋರ್(15) ಮೃತಪಟ್ಟವರು. ಕಿರಣ್ ಅವರ ಪುತ್ರಿ ಕೀರ್ತನಾ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಟುಂಬ ಮೈಸೂರಿನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಡಿವೈಡರ್‌ಗೆ  ಗುದ್ದಿ ಅಲ್ಲಿಂದ ಹಾರಿ ಎದುರಿನಿಂದ  ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಮೃತರು ಮಂಡ್ಯ ಕಚಿಗೆರೆ ಗ್ರಾಮದ ನಿವಾಸಿಗಳಾಗಿದ್ದು, ಗಾಯಗೊಂಡ ಬಾಲಕಿ ಮತ್ತು ಮೃತರ ಶವಗಳನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ರವಾನಿಸಲಾಗಿದೆ. ಮಂಡ್ಯ ಕೇಂದ್ರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *