Menu

ಮೊಳಕಾಲ್ಮೂರಿನಲ್ಲಿ ರಸ್ತೆ ಅಪಘಾತಕ್ಕೆ ತಂದೆ, ಮಕ್ಕಳಿಬ್ಬರು ಬಲಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಮಜೀದ್ ಬಳಿ ಚಳ್ಳಕೆರೆ ಮತ್ತು ಬಳ್ಳಾರಿ ನಡುವಿನ ರಾಷ್ಟ್ರೀಯ ಹೆದ್ದಾರಿ-150 ಎನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ಕಾರು ಚಲಾಯಿಸುತ್ತಿದ್ದ ಮೌಲಾ ಅಬ್ದುಲ್ (35) ಮತ್ತು ಅವರ ಪುತ್ರರಾದ ರೆಹಮಾನ್ (15) ಮತ್ತು ಸಮೀರ್ (10) ಮೃತಪಟ್ಟವರು. ಮೌಲಾ ಅವರ ಪತ್ನಿ ಸಲೀಮಾ ಬೇಗಂ (31), ತಾಯಿ ಫಾತಿಮಾ (75) ಮತ್ತೊಬ್ಬ ಪುತ್ರ ಹುಸೇನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಗಾಯಾಳುಗಳನ್ನು ಬಳ್ಳಾರಿ ವಿಐಎಂಎಸ್ ಆಸ್ಪತ್ರೆಗೆ ಸೇರಿಸಿದ್ದಾರೆ.

ಯಾದಗಿರಿ ಮೂಲದ ಈ ಕುಟುಂಬ ಬೆಂಗಳೂರಿನಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರು ಕಡೆಯಿಂದ ರಾಂಪುರ ಕಡೆ ತೆರಳುತ್ತಿದ್ದಾಗ ಕಾರು ಪಲ್ಟಿಯಾಗಿ ಪಕ್ಕದ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಉರುಳಿ ಬಿದ್ದಿದೆ.

Related Posts

Leave a Reply

Your email address will not be published. Required fields are marked *