Menu

ಭಾರತದಿಂದ ಪ್ರತೀಕಾರದ ಭೀತಿ: ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್‌

ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತವು ತನ್ನ ಮೇಲೆ  ದಾಳಿ ನಡೆಸಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ ತನ್ನ ಕ್ಷಿಪಣಿ ಪರೀಕ್ಷೆಗೆ ಮುಂದಾಗಿದೆ. ವಿಶೇಷ ಆರ್ಥಿಕ ವಲಯದೊಳಗಿನ ಕರಾಚಿ ಕರಾವಳಿಯಲ್ಲಿ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಂಡಿರುವುದಾಗಿ ರಕ್ಷಣಾ ಮೂಲಗಳನ್ನು ಆಧರಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸಿಂಧೂ ಜಲ ಒಪ್ಪಂದ ರದ್ದು ಮತ್ತು ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಲು ಭಾರತ ಮುಂದಾಗುತ್ತಿದ್ದಂತೆ ಪಾಕಿಸ್ತಾನ ಸರ್ಕಾರ ಉನ್ನತ ಮಟ್ಟದ ಭದ್ರತಾ ಸಭೆಯನ್ನು ನಡೆಸಲಿದೆ ಎಂದು ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಸಭೆಯಲ್ಲಿ ಪ್ರಧಾನ ಮಂತ್ರಿ ಮೂರು ಪಡೆಗಳ ಮುಖ್ಯಸ್ಥರು ಮತ್ತು ಪ್ರಮುಖ ಪ್ರಮುಖ ಮಂತ್ರಿಗಳು ಭಾಗವಹಿಸಲಿದ್ದಾರೆ.

ಭಾರತವು ಪಾಕಿಸ್ತಾನ ಸರ್ಕಾರದ ಎಕ್ಸ್‌ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಸೂಚಿಸಲಾಗಿದೆ.

ದಾಳಿ ಬಳಿಕ ನಡೆದ ಸಿಸಿಎಸ್ ಸಭೆಯಲ್ಲಿ ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವು ಕ್ರಮಗಳನ್ನು ಕೈಗೊಂಡಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ ಮುಚ್ಚಲು ಆದೇಶಿಸಲಾಗಿದೆ. ಪಾಕ್‌ ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸು ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿದೆ.

Related Posts

Leave a Reply

Your email address will not be published. Required fields are marked *