Wednesday, September 30, 2026
Menu

ಹಾಸನದಲ್ಲಿ ರಸ್ತೆ ಅಪಘಾತಕ್ಕೆ ವಿದ್ಯಾರ್ಥಿನಿ ಬಲಿ

ಹಾಸನ ನಗರದ ವಿಶ್ವಕರ್ಮ ವೃತ್ತದಲ್ಲಿ ರಸ್ತೆ ಅಪಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ೧೮ ವರ್ಷದ ಲಿಖಿತಾ ಅಪಘಾತಕ್ಕೆ ಬಲಿಯಾಗಿರುವ ವಿದ್ಯಾರ್ಥಿನಿ, ಚಿನ್ಮಯಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಲೇಜು ಮುಗಿಸಿ ಮನೆಗೆ ಬಂದಿದ್ದ ಲಿಖಿತಾ ಗೆಳತಿಯೊಂದಿಗೆ ಸ್ಕೂಟರ್‌ನಲ್ಲಿ ಸಿಟಿಗೆ ತೆರಳಿದ್ದಳು. ಹಅಸನ ಬಸ್‌ ನಿಲ್ದಾಣ ಕಡೆಯಿಂದ ಡೈರಿಯತ್ತ ಸ್ಕೂಟರ್‌ ತಿರುಗಿಸುವಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಚಾಲಕ ಪಾನಮತ್ತನಾಗಿ ಲಾರಿ ಚಲಾಯಿಸಿದ್ದರಿಂದಲೇ ಅಪಘಾತ ಆಗಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ನಗರದ ಒಳಗೆ ಭಾರಿ ಪ್ರಮಾಣದ ಲಾರಿಯನ್ನು ಹೇಗೆ ಬಿಟ್ಟಿದ್ದೀರ, ಸರಿಯಾದ ಸಂಚಾರ ಫಲಕ ಇಲ್ಲ. ಟ್ರಾಫಿಕ್‌ ಸಿಗ್ನಲ್‌ ಇಲ್ಲ ಎಂದು ಪೊಲೀಸರ ವಿರುದ್ಧ ಜನರು ಕಿಡಿ ಕಾರಿದ್ದಾರೆ.

ಮೊಬೈಲ್‌ ಬಿಟ್ಟು ಓದು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಹಾವೇರಿಯ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ಮೊಬೈಲ್‌ ಪೋನ್‌ ಬಳಕೆ ಕಡಿಮೆ ಮಾಡಿ ಓದಿನ ಕಡೆ ಗಮನ ಹರಿಸು ಎಂದು ಪೋಷಕರು ಹೇಳಿದ್ದಕ್ಕೆ ನೊಂದ ೧೫ ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹರ್ಷ ಮೋರೆ ಆತ್ಮಹತ್ಯೆ ಮಾಡಿಕೊಂಡ ಬಾಲಕ, ಆತ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ. ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಕ ಹೆಚ್ಚು ಸಮಯ ಮೊಬೈಲ್ ಬಳಸುತ್ತಿರುವುದನ್ನು ಗಮನಿಸಿದ ಪೋಷಕರು, ಮೊಬೈಲ್ ಬಿಟ್ಟು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸುವಂತೆ ಹೇಳಿದ್ದರು.

ಬಳಿಕ ಮನೆಯ ಕೋಣೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *