Thursday, January 30, 2025
Menu

ಎಸ್‌ಸಿ/ಎಸ್‌ಟಿ ದೌರ್ಜನ್ಯ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್ ಸೇರಿ 16 ಮಂದಿ ವಿರುದ್ಧ ಎಫ್ ಐಆರ್

ಬೆಂಗಳೂರು: ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಇನ್ಫೋಸಿಸ್ ಸಹ – ಸಂಸ್ಥಾಪಕ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್, ಐಐಎಸ್ಸಿಯ ಮಾಜಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್‌) ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.

ಬೋವಿ ಸಮುದಾಯ (ಪರಿಶಿಷ್ಟ ಜಾತಿ)ಕ್ಕೆ ಸೇರಿದ ದೂರುದಾರ ದುರ್ಗಪ್ಪ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಈ ದೂರು ದಾಖಲಿಸಿಕೊಂಡಿದ್ದಾರೆ.

ದುರ್ಗಪ್ಪ ಅವರು ಈ ಹಿಂದೆ ಪ್ರತಿಷ್ಠಿತ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್ಸಿ)ಯಲ್ಲಿ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. 2014ರಲ್ಲಿ, ತಮ್ಮನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿ ನಂತರ ಉದ್ಯೋಗದಿಂದ ವಜಾಗೊಳಿಸಲಾಯಿತು, ಅಲ್ಲದೆ ಜಾತಿ ನಿಂದನೆ ಮತ್ತು ಬೆದರಿಕೆಗಳಿಗೆ ಒಳಗಾಗಿದ್ದಾಗಿ ಅವರು ಆರೋಪಿಸಿದ್ದಾರೆ.

ತೆಂಡೂಲ್ಕರ್‌, ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ ಫಸ್ಟ್‌ ಕ್ರೈನಲ್ಲಿ ಹಲವು ಸೆಲೆಬ್ರಿಟಿಗಳಿಂದ ಹೂಡಿಕೆಕ್ರಿಸ್‌ ಗೋಪಾಲಕೃಷ್ಣನ್ ಅವರು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ನ ಟ್ರಸ್ಟಿಗಳ ಮಂಡಳಿಯ ಸದಸ್ಯರೂ ಆಗಿದ್ದಾರೆ. ಇವರಲ್ಲದೆ ಈ ಪ್ರಕರಣದ ಇತರ ಆರೋಪಿಗಳಲ್ಲಿ ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಬಲರಾಮ್ ಪಿ, ಹೇಮಲತಾ ಮಹಿಶಿ, ಚಟೋಪಾಧ್ಯಾಯ ಕೆ, ಪ್ರದೀಪ್ ಡಿ ಸಾವ್ಕರ್ ಮತ್ತು ಮನೋಹರನ್ ಸೇರಿದ್ದಾರೆ.

ಇವರು ಐಐಎಸ್ಸಿಯ ಸದಸ್ಯರಾಗಿದ್ದಾರೆ.ಈ ಬಗ್ಗೆ ಐಐಎಸ್ಸಿ ಪ್ರಾಧ್ಯಾಪಕರು ಹಾಗೂ ಐಐಎಸ್ಸಿ ಟ್ರಸ್ಟಿಗಳ ಮಂಡಳಿಯ ಸದಸ್ಯರಾಗಿರುವ ಕ್ರಿಸ್‌ ಗೋಪಾಲಕೃಷ್ಣನ್ ಅವರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೋಪಾಲಕೃಷ್ಣನ್‌ ದೇಶದ ಖ್ಯಾತ ಐಟಿ ಸಂಸ್ಥೆ ಇನ್ಫೋಸಿಸ್‌ನ ಸಹ ಸಂಸ್ಥಾಪಕರಾಗಿದ್ದು, 2007ರಿಂದ 2011ರವರೆಗೆ ಕಂಪನಿಯ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. 2011ರಿಂದ 2014ರವರೆಗೆ ಅವರು ಕಂಪನಿಯ ಉಪಾಧ್ಯಕ್ಷರಾಗಿದ್ದರು. ಸದ್ಯ ಸ್ಟಾರ್ಟಪ್‌ ಅಕ್ಸಲರೇಟರ್‌ ಸಂಸ್ಥೆ ಆಕ್ಸಿಲರ್‌ ವೆಂಚರ್ಸ್‌ನ ಅಧ್ಯಕ್ಷರಾಗಿದ್ದಾರೆ.

2024ರ ಹುರುನ್‌ ಇಂಡಿಯಾ ಸಿರಿವಂತರ ಪಟ್ಟಿಯ ಪ್ರಕಾರ ಕ್ರಿಸ್‌ ಗೋಪಾಲಕೃಷ್ಣನ್‌ ಬೆಂಗಳೂರು ನಗರದ ಸಿರಿವಂತರಲ್ಲಿ ಒಬ್ಬರಾಗಿದ್ದು, ಅವರ ಒಟ್ಟು ಆಸ್ತಿ ಸುಮಾರು 38,500 ಕೋಟಿ ರೂ. ಆಗಿದೆ.

Related Posts

Leave a Reply

Your email address will not be published. Required fields are marked *