Menu

ಪ್ರಭಾಕರ್ ಕಲ್ಲಡ್ಕ ಸೇರಿ 17 ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐಆರ್!

kalladka prabhakr bhat

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಹಾಗೂ ಸೇಡು-ದ್ವೇಷ ಭಾವನೆ ಹಿನ್ನೆಲೆಯಲ್ಲಿ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 17 ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ ಬಿಎನ್​ಎಸ್​​ 353(2)ರಡಿ FIR ದಾಖಲಾಗಿದೆ.

ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ದೂರಿನ ಹಿನ್ನೆಲೆಯಲ್ಲಿ 15 ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

ಪ್ರಮೋದ್ ರೈ ನಂದುಗುರಿ, ತಿಲಕ್​ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್​ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್​ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅರುಣ್ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ರಾತ್ರೋರಾತ್ರಿ ಕಡಬ ತಾಲೂಕಿನ ವಿಹೆಚ್​ಪಿ ಸಂಘಟನೆ ಮುಖಂಡರ ಮನೆಗಳಿಗೆ ಭೇಟಿ ನೀಡಿ, ಜಿಪಿಎಸ್ ಫೋಟೋ ತೆಗೆದು ಸಂಘಟನೆ ಮುಖಂಡರ ಮಾಹಿತಿ ಸಂಗ್ರಹಿಸುವ ಮೂಲಕ ಎಲ್ಲರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related Posts

Leave a Reply

Your email address will not be published. Required fields are marked *