ಬಿಗ್ ಬಾಸ್ ಸೀಸನ್ ೧೧ರ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿನಯ್ ಗೌಡ ಹಾಗೂ ರಜತ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವೀಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದಙೇ ವಿಚಾರಕ್ಕೆ ಅವರಿಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಸ್ಥಳದದಲ್ಲಿ ಕಾನೂನು ಬಾಹಿರವಾಗಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿದ್ದಕ್ಕೆ ದಂಡ ತೆರುವಂತಾಗಿದೆ. ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗ್‌ಹ ಹಿಡಿದು, ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ವೀಡಿಯೊ ಗಮನಿಸಿದ ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರೀಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸುವುದು ಕಾನೂನು ಪ್ರಕಾರ ಅಪರಾಧ ಎಂಬ ನಿಟ್ಟಿನಲ್ಲಿ ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.