ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಹಲವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಅರ್ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಬ್ರಹ್ಮಾವರ ಪೊಲೀಸರು ಬಂದಿದ್ದಾಗ ಗಿರೀಶ್ ಮಟ್ಟಣ್ಣನವರ್, ಜಯಂತ್ ಮತ್ತು ಇತರರು ಪೊಲೀಸರಿಗೆ ಅಡ್ಡಿಪಡಿಸಿದ್ದರು ಎಂಬ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಚಾರಣೆಗೆ ಹಾಜರಾಗಲು ಬೆಳ್ತಂಗಡಿ ಎಸ್‌ಐಟಿ ಠಾಣೆಗೆ ಗಿರೀಶ್ ಮಟ್ಟಣ್ಣನವರ್ ಆಗಮಿಸಿದ್ದು, ಪೊಲೀಸರು ವಿಚಾರಣೆ ನಡೆಸಿ ಕಳುಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಗಿರೀಶ್ ಮಟ್ಟಣ್ಣನವರ್, ತಿಮರೋಡಿಯನ್ನು ಬಂಧಿಸಲು 100 ಪೊಲೀಸರು ಬಂದಿದ್ದರು. ಮನೆಯವರು ಏಕೆ ಬಂದಿದ್ದೀರಾ ಎಂದು ಕೇಳಿದ್ದಾರೆ, ಯಾರೂ ಪೊಲೀಸರಿಗೆ ಅಡ್ಡಿ ಮಾಡಿಲ್ಲ ಎಂದು ತಿಳಿಸಿದರು.
ಇವತ್ತು 30 ಜನರ ಮೇಲೆ ವಿರುದ್ಧ ಅಂತ ಸುದ್ದಿ ಬಂದಿದೆ. ಬಂಧಿಸುವುದಾದರೆ ಬಂಧಿಸಲಿ, ನಾನೇ ಬಂದಿದ್ದೇನೆ ಎಂದರು. ನಿನ್ನೆ ಬೆಳಗ್ಗೆ ಠಾಣೆಗೆ ಹೊರಟಿದ್ದಾಗ ತಕ್ಚಣ ಮನೆಗೆ ಬಂದು ಬಂದು ಅರೆಸ್ಟ್ ಮಾಡಿದ್ದಾರೆ. ನಮ್ಮ ಮೇಲೆ ಕೇಸ್ ಆಗಿದ್ದು ನಾವೂ ಎಲ್ಲಿಯೂ ಓಡಿಹೋಗುವುದಿಲ್ಲ ಎಂದು ಹೇಳಿದರು.