ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕ ಬಾಪೂಜಿನಗರದ ನಿವಾಸಿ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಕೆ. ಸುಧಾಕರ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಕಾರು ಚಾಲಕ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಕೆ.ಸುಧಾಕರ್, ಅವರ ಆಪ್ತ ನಾಗೇಶ್ ಹಾಗೂ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕ ಮೋಹನ್ ಕಾರಣವೆಂದು ಉಲ್ಲೇಖಿಸರುವುದನ್ನು ಆಧರಿಸಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರು ವಂಚಿಸಿದ್ದಾರೆ ಎಂದು ಡೆತ್ ನೋಟ್‌ನಲ್ಲಿ ಬಾಬು ಆರೋಪ ಮಾಡಿದ್ದಾರೆ.
ಕಾರು ಚಾಲಕ ನನ್ನ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿರುವುವುದು ರಾಜಕೀಯ ಪ್ರೇರಿತ ಎಂದು ಸಂಸದ ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆ ಆಗಲಿದೆ ಎಂದು ಹೇಳಿದ್ದಾರೆ.