Menu

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ವೈದ್ಯರ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕರ್ತವ್ಯದಲ್ಲಿದ್ದ ವೈದ್ಯರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.

ಮುಂಜಾನೆ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಮಹಡಿ ಪೂರ್ತಿ ಬೆಂಕಿ ವ್ಯಾಪಿಸಿತ್ತು. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ಕಟ್ಟಡದ ಎಲ್ಲಾ ರೋಗಿಗಳನ್ನ ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ. ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ 3.30ಕ್ಕೆ ಡಾ. ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನಾರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಶಬ್ದ ಕೇಳಿ ಕೂಡಲೇ ಅಲರ್ಟ್ ಆದ ದಿವ್ಯಾ ಮತ್ತು ಸಿಬ್ಬಂದಿ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸೂಪರಿಂಟೆಂಡೆಂಟ್‌ಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಕಿ ನಂದಿಸುವ ಜೊತೆಗೆ ಹಿರಿಯ ಅಧಿಕಾರಿಗಳಿಗೆ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. 30 ನಿಮಿಷದಲ್ಲಿ ಐಸಿಯುನಲ್ಲಿದ್ದವರು ಸೇರಿ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

Related Posts

Leave a Reply

Your email address will not be published. Required fields are marked *