Menu

ದೆಹಲಿಯ ಹೋಟೆಲ್‌ನಲ್ಲಿ ಬೆಂಕಿ: 21 ಮಂದಿ ಸಾವು

ದೆಹಲಿಯ ಮಾಳವೀಯ ನಗರದ ಐದು ಅಂತಸ್ತಿನ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ಈ ಹೋಟೆಲ್‌ ಇಕ್ಕಟ್ಟಾದ ಬೀದಿಯಲ್ಲಿರುವ ಕಾರಣ ದಟ್ಟ ಹೊಗೆ ನಡುವೆ ರಕ್ಷಣಾ ಕಾರ್ಯಾಚರಣೆ ಬಹಳಷ್ಟು ಕಷ್ಟವಾಗಿತ್ತು. ಬುಧವಾರ ಬೆಳಗ್ಗೆ ಒಂಬತ್ತು ಗಂಟೆ ವೇಳೆ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಕೆಲವರು ಕಟ್ಟಡದ ಮೇಲಿಂದ ಕೆಳಗೆ ಹಾರಿದ್ದಾರೆ.
25 ರೂಮ್‌ಗಳಿರುವ ಈ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡಾಗ ಸಾಕಷ್ಟು ಅತಿಥಿಗಳಿದ್ದರು. ಹೆಚ್ಚಿನವರು ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಗಳಾಗಿದ್ದರು. ಬೆಳಗ್ಗೆ ಹೆಚ್ಚಿನವರು ನಿದ್ದೆಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದೆ.

ಹೋಟೆಲ್‌ಗೆ ಬೆಂಕಿ ಬಿದ್ದ ತಕ್ಷಣ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿದೆ. ಹೊರಗೆ ಬಂದು ನೋಡಿದಾಗ ಇಡೀ ಹೋಟೆಲ್‌ಗೆ ಬೆಂಕಿ ಆವರಿಸಿತ್ತು. ಹೇಗೆ ಅಂತ ಗೊತ್ತಿಲ್ಲ, ಹೇಗೋ ಅಲ್ಲಿಂದ ಓಡಿಬಂದು ಪ್ರಾಣ ಉಳಿಸಿಕೊಂಡೆ ಎಂದು ಹೋಟೆಲ್ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. ೪೦ ಮಂದಿ ಗಾಯಗೊಂಡಿದ್ದು, ಅವರನ್ನೆಲ್ಲ  ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತನಿಖೆ ಬಳಿಕ ಗೊತ್ತಾಗಬೇಕಿದೆ.

Related Posts

Leave a Reply

Your email address will not be published. Required fields are marked *