ಮಹಾರಾಷ್ಟ್ರದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕುಂಭಮೇಳ ನಗರದ ಸೆಕ್ಟರ್ 18ರ ಹಳೇ ಜಿಟಿ ರಸ್ತೆಯಲ್ಲಿರುವ ತುಳಸಿ ಚೌಹಾರದಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.
ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಸಣ್ಣ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದು ಹೇಳಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕೆಲವು ದಿನಗಳ ಹಿಂದೆಯಷ್ಟೇ ಕಾಲ್ತುಳಿತದಲ್ಲಿ 30ಕ್ಕೂ ಹೆಚ್ಚು ಮಂದಿ ಭಕ್ತರು ಮೃತಪಟ್ಟಿದ್ದರು. ಅಲ್ಲದೇ ಭಕ್ತರು ತಂಗಲು ವ್ಯವಸ್ಥೆ ಮಾಡಲಾಗಿದ್ದ ಶಿಬಿರದಲ್ಲಿ ಬೆಂಕಿ ಕಾಣಿಸಿಕೊ೦ಡು 20ಕ್ಕೂ ಹೆಚ್ಚು ಶಿಬಿರಗಳು ಆಹುತಿಯಾಗಿತ್ತು.
ಕುಂಭಮೇಳದಲ್ಲಿ ಇದುವರೆಗೆ ಸುಮಾರು 40 ಕೋಟಿಯಷ್ಟು ಜನರು ಪುಣ್ಯಸ್ನಾನ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಗಂಗಾ, ಯಮುನಾ ಮತ್ತು ಸರಸ್ವತಿ ನದಿಯ ತ್ರಿವಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.