ಮೊನ್ನೆಯಷ್ಟೇ ಪ್ರಯಾಣಿಕರನ್ನು ತುಂಬಿಕೊಂಡು ಮೆಜೆಸ್ಟಿಕ್‌ನಿಂದ ಹೊರಟಿದ್ದ ಬಿಎಂಟಿಸಿ ಬಸ್ಸೊಂದು ಬೆಂಕಿ ಹೊತ್ತಿಕೊಂಡು ಕರಕಲಾಗಿ ಹೋಗಿದ್ದು, ಇದೀಗ ಚಲಿಸುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮೆಜೆಸ್ಟಿಕ್‌ನಿಂದ ಅತ್ತಿಬೆಲೆ ಕಡೆ ಹೋಗುತ್ತಿದ್ದಾಗ ನೃಪತುಂಗ ರಸ್ತೆಯಲ್ಲಿ ಬಸ್‌ನಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಎಚ್ಚೆತ್ತುಕೊಂಡ ಚಾಲಕ ಮತ್ತು ನಿರ್ವಾಹಕರು ಬಸ್ ಅನ್ನು ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಇಳಿಸಿದ್ದಾರೆ.
ಸೋಮವಾರ ಕೆಂಪೇಗೌಡ ಬಸ್ ನಿಲ್ದಾಣ ಮೆಜೆಸ್ಟಿಕ್‌ನಿಂದ ಕಾಡುಗೋಡಿ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚರಿಸುತ್ತಿತ್ತು. ಬಸ್‌ನಲ್ಲಿ 50 ಮಂದಿ ಪ್ರಯಾಣ ಮಾಡುತ್ತಿದ್ದರು. ಬೆಳಿಗ್ಗೆ 5:10ಕ್ಕೆ ಎಚ್‌ಎಎಲ್ ಬಸ್ ನಿಲ್ದಾಣದ ಬಳಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಾಲಕ ಜಯಚಂದ್ರ ಮತ್ತು ನಿರ್ವಾಹಕ ಚೌಡಪ್ಪ ಸಮಯ ಪ್ರಜ್ಞೆಯಿಂದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ್ದಾರೆ.
ಬೆಂಕಿಯು ಎಂಜಿನ್‌ನಿಂದ ಪ್ರಾರಂಭವಾಗಿ ಇಡೀ ಬಸ್‌ಗೆ ಬೆಂಕಿ ವ್ಯಾಪಿಸಿ ಸುಟ್ಟು ಕರಕಲಾಗಿತ್ತು. ಈ ಘಟನೆಗಳಿಂದ ಬಿಎಂಟಿಸಿ ಬಸ್‌ಗಳ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ. ಬಸ್ಸುಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.