ಕೇರಳ ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯ ಬಳಿ ಸರಕು ತುಂಬಿದ್ದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ 18 ಮಂದಿ ಸಮುದ್ರಕ್ಕೆ ಹಾರಿದ್ದು, ಅವರನ್ನೆಲ್ಲ ರಕ್ಷಿಸಲಾಗಿದೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆ ಯಲ್ಲಿ ನಾಲ್ವರು ನಾಪತ್ತೆಯಾಗಿದ್ದಾರೆ.
ಹಡಗಿನಲ್ಲಿದ್ದ ಇಪ್ಪತ್ತು ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿವೆ. ಎಂವಿ ವಾನ್ ಹೈ 503 ಹೆಸರಿನ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟಿದ್ದು, ಮುಂಬೈಗೆ ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಹಡಗಿನಲ್ಲಿ 650 ಕಂಟೇನರ್ ಗಳಿದ್ದವು.
ಚೀನಾ, ಮ್ಯಾನ್ಮಾರ್, ಇಂಡೋನೇಷ್ಯಾ ಹಾಗೂ ಥೈಲ್ಯಾಂಡ್‌ಗೆ ಸೇರಿದ 22 ಸಿಬ್ಬಂದಿ ಹಡಗಿನಲ್ಲಿ ಇದ್ದರು. ಬೆಂಕಿ ಕಾಣಿಸಿಕೊಂಡ ವೇಳೆ 18 ಮಂದಿ ಸಮುದ್ರಕ್ಕೆ ಹಾರಿದ್ದು, ಅವರನ್ನೆಲ್ಲ ರಕ್ಷಿಸಲಾಗಿದೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ನಾಲ್ವರು ನಾಪತ್ತೆಯಾಗಿದ್ದಾರೆ.
ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆಯ ಹಡಗುಗಳು ಘಟನಾ ಸ್ಥಳಕ್ಕೆ ತೆರಳಿದ್ದು, ಹಡಗಿನಲ್ಲಿದ್ದವರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.