Menu

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: ನಾಲ್ವರ ದುರ್ಮರಣ

ಬಹುಮಹಡಿ ವಸತಿ ಕಟ್ಟಡದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟು 10 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಸಂಭವಿಸಿದೆ.

ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್‌ನ 10ನೇ ಮಹಡಿಯಲ್ಲಿ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ 11 ಮತ್ತು 12ನೇ ಮಹಡಿಗೂ ಹರಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 6 ವರ್ಷದ ಬಾಲಕಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಾಶಿಯ ಎರಡು ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಬೆಂಕಿ ಅವಘಡದ ಕುರಿತು ಮಾಹಿತಿ ದೊರೆಯುತ್ತಿದ್ದಂತೆ 40 ಅಗ್ನಿಶಾಮಕ ದಳದ ಸಿಬ್ಬಂದಿ, 8 ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಮಂಗಳವಾರ ಬೆಳಗ್ಗೆ 4 ಗಂಟೆಯ ಸುಮಾರಿಗೆ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

Related Posts

Leave a Reply

Your email address will not be published. Required fields are marked *