ಚಿತ್ರದುರ್ಗ ತಾಲೂಕಿನ ಸಿಬಾರಾ ಗ್ರಾಮದ ಬಳಿ ಲಾರಿ-ಇನ್ನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಅಸು ನೀಗಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಸಿಬಾರ ಗ್ರಾಮದ ಹೋಟೆಲ್‌ವೊಂದರ ಬಳಿ ಬೆಂಗಳೂರು ಮೂಲದ ಲಾರಿ ಹಾಗೂ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಗಾಯಗೊಂಡ ಓರ್ವನ ಸ್ಥಿತಿ ಗಂಭೀರವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಇನ್ನಷ್ಟೇ ಹೆಚ್ಚಿನ ಮಾಹಿತಿಯನ್ನು ನೀಡಬೇಕಿದೆ.