Menu

ಚಿತ್ರದುರ್ಗದಲ್ಲಿ ಕಾರು ಟೈರ್‌ ಸ್ಫೋಟಗೊಂಡು ಐವರ ಸಾವು

ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್‌ ಮೃತಪಟ್ಟವರು.

ಇವರೆಲ್ಲ ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಬರುತ್ತಿದ್ದಾಗ ಅತಿ ವೇಗದಿಂದ ಕಾರಿನ ಟೈಯರ್‌ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ‌ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮೊಳಕಾಲ್ಮುರು ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *