Tuesday, February 10, 2026
Menu

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸುಸೈಡ್‌

ಉತ್ತರ ಪ್ರದೇಶದ ಮಥುರಾದಲ್ಲಿ ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಮೂವರು ಮಕ್ಕಳು ರಾತ್ರಿ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎನ್ನಲಾಗಿದೆ.

ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಮನೆಯವರು ಬೆಳಗ್ಗೆ ಎಚ್ಚರಗೊಳ್ಳದಿದ್ದಾಗ ಪಕ್ಕದ ಮನೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ದುರಂತ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರನ್ನು ವಿಚಾರಣೆ ನಡೆಸಲಾಗುತ್ತಿದೆ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿ ಮೊದಲು ಮೂವರು ಮಕ್ಕಳ ಹಾಲಿಗೆ ವಿಷ ಬೆರೆಸಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರ್ನಾಟಕದ ಕುಟುಂಬ ಬಿಹಾರದಲ್ಲಿ ಸುಸೈಡ್‌

ಕೆಲವು ದಿನಗಳ ಹಿಂದೆ ಮತ್ತೊಂದು ಘಟನೆ ಬಿಹಾರದಲ್ಲಿ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಟುಂಬವೊಂದರ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು.

ನಾಗಪ್ರಸನ್ನ, ತಾಯಿ ಸುಮಂಗಲಾ, ಸಹೋದರಿ ಶಿಲ್ಪಾ, ಶ್ರುತಾ ಆತ್ಮಹತ್ಯೆ ಮಾಡಿಕೊಂಡವರು. ಮೊಬೈಲ್‌ ಗೇಮ್‌ ಅಡಿಕ್ಟ್ ಆಗಿದ್ದ ಅಕ್ಕನ ಮಗ ಅಮೋಘಕೀರ್ತಿಯನ್ನು ಮಾವ ನಾಗಪ್ರಸಾದ್ ಕೊಲೆ ಮಾಡಿದ್ದರು.

ಈ ಘಟನೆಯಿಂದ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ನಿದ್ದೆ ಮಾತ್ರೆಗಳ ಓವರ್ ಡೋಸ್​ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.

Related Posts

Leave a Reply

Your email address will not be published. Required fields are marked *