ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದಾಗ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಐವರು ನೇಪಾಳಿ ಪ್ರಜೆಗಳು ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಒಂಬತ್ತು ಜನರಲ್ಲಿ ಐವರು ಸ್ಥಳದಲ್ಲೇ ಅಸು ನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಚನಾ ಠಾಕೂರ್, ಇಂದು ದೇವಿ, ಮಂತರ್ಣಿ ದೇವಿ, ಬಾಲ ಕೃಷ್ಣ ಝಾ ಮತ್ತು ಚಾಲಕ ಮೃತಪಟ್ಟವರು.
ಗಾಯಗೊಂಡಿರುವ ಮನೋಹರ್ ಠಾಕೂರ್, ಸೃಷ್ಟಿ ಠಾಕೂರ್, ಕಮ್ನಿ ಝಾ ಮತ್ತು ದೇವತರಣ್ ದೇವಿ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಬನಿ ಚತುಷ್ಪಥ ಬೈಪಾಸ್‌ನಲ್ಲಿ ವೇಗವಾಗಿ ಬಂದ ಎಸ್‌ಯುವಿ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ದುರಂತ ಸಂಭವಿಸಿದೆ.
ಅಪಘಾತದ ವೇಳೆ ವಾಹನದ ಏರ್‌ಬ್ಯಾಗ್‌ಗಳು ತೆರೆದಿಲ್ಲ. ಇದರಿಂದಾಗಿ ಸ್ಥಳದಲ್ಲೇ ಐವರು ಮೃತಪದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಕಳುಹಿಸುವಲ್ಲಿ ನೆರವಾಗಿದ್ದಾರೆ.