ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಮತ್ತು ಫಾತೀಮಾ ಅಲಿ (38) ಂದು ಗುರುತಿಸಲಾಗಿದೆ.
ಕುಟುಂಬದವರು ವೈಯಕ್ತಿಕ ಮುಗಿಸಿಕೊಂಡು ಮಧ್ಯರಾತ್ರಿ ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ವಾಪಸ್ ಆಗುತ್ತಿದ್ದರು. ಲಾಡ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಐವರ ಪ್ರಾಣ ಹೋಗಿದೆ. ಕ್ರೂಸರ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸಿ ನುಜ್ಜುಗುಜ್ಜಾದ ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಕ್ರಮ ಕೈಗೊಂಡಿದ್ದಾರೆ.


