ಪಶ್ಚಿಮ ಬಂಗಾಳ, ಕೇರಳ, ತಮಿಳ್ನಾಡು, ಅಸ್ಸಾಂ, ಪುದುಚೇರಿಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 140 ಸದಸ್ಯರ ಬಲವನ್ನು ಹೊಂದಿರುವ ಕೇರಳ ವಿಧಾನಸಭೆಯಲ್ಲಿ 2001ರ ವಿಧಾನಸಭಾ ಚುನಾವಣೆಯ ನಂತರದ ಯುಡಿಎಫ್ನ ಅತ್ಯುತ್ತಮ ಫಲಿತಾಂಶ ಇದಾಗಿದೆ.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ‘ದಳಪತಿ’ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಜಯ ಗಳಿಸಿದೆ. ವಿಜಯ್ ಮೊದಲ ಪ್ರಯತ್ನದಲ್ಲೇ ಸಿಎಂ ಗಾದಿಯತ್ತ ಹೆಜ್ಜೆ ಇಟ್ಟಿದ್ದಾರೆ. ವಿಜಯ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅಸ್ಸಾಂನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಪುದುಚೇರಿಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ.


