ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ. ವಿದೇಶಿ ಎನ್‌ಜಿಒಗಳಿಂದ ಹಣ ಬಂದಿದೆಯೇ ಎಂಬ ವಿಚಾರ ತಿಳಿಯಲು ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್ ಗಳ ಬಗ್ಗೆ ಇಡಿ ಮಾಹಿತಿ ನೀಡುವಂತೆ ಬ್ಯಾಂಕ್ಗೆ ಪತ್ರದ ಮೂಲಕ ಮನವಿ ಮಾಡಿದೆ.
ಕಾನೂನು ಬಾಹಿರವಾಗಿ ಹಣ ಬಂದಿರುವ ಆರೋಪದ ಕಾರಣ ಇಡಿ ಅಧಿಕಾರಿಗಳು ಕಳೆದ 5 ವರ್ಷಗಳ ಟ್ರಾನ್ಸ್ಕ್ಷನ್ ನೀಡುವಂತೆ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ. ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಸಂಬಂಧಿಸಿದ ಆಖಲೆಗಳು, ವಿದೇಶದಿಂದ ಹಣ ಬಂದಿದ್ದರೆ ಯಾವ ಕಾರಣಕ್ಕೆ ಎಂಬುದನ್ನು ತಿಳಿಸುವಂತೆ ಬ್ಯಾಂಕ್ ಗಳಿಗೆ ಇಡಿ ಅಧಿಕಾರಿಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್ಗಳಿಗೆ ವಿದೇಶಗಳಿಂದ ಹಣ ಸಂದಾಯವಾಗುತ್ತಿದೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕು ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದರು.