Menu

ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲಿಗೆ ಡಿಸಿಗೆ ಅರಣ್ಯ ಇಲಾಖೆ ಪತ್ರ

ಇತ್ತೀಚೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಸಮಾಧಿ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ವಿವಾದದ ಕೇಂದ್ರಬಿಂದುವಾಗಿದ್ದ ಅಭಿಮಾನ್‌ ಸ್ಟುಡಿಯೊ ಇರುವ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆಯು ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಪತ್ರ ಬರೆದಿದೆ.

ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮಕ್ಕೆ ಸೇರಿದ ಸರ್ವೇ ನಂ, 26ರಲ್ಲಿ ಅಭಿಮಾನ್ ಸ್ಟುಡಿಯೋಗೆ ಸರ್ಕಾರ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದು ಪಡಿಸಿ ಹಿಂಪಡೆಯುವ ಬಗ್ಗೆ ಅರಣ್ಯ ಇಲಾಖೆ ಪತ್ರದಲ್ಲಿ ಉಲ್ಲೇಖಿಸಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್ ರವೀಂದ್ರಕುಮಾರ್ ಪತ್ರ ಬರೆದಿದ್ದು, ಸರ್ಕಾರಿ ಆದೇಶದ ಅನ್ವಯ ಏಪ್ರಿಲ್‌ 09, 1969 ರಂದು 20 ಎಕರೆ ಪ್ರದೇಶವನ್ನು ಟಿ ಎನ್ ಬಾಲಕೃಷ್ಣ ಅವರಿಗೆ ಅಭಿಮಾನ್ ಚಿತ್ರ ಸ್ಟುಡಿಯೋ ಸ್ಥಾಪಿಸುವ ಸಲುವಾಗಿ 20 ವರ್ಷಗಳ ಅವಧಿಗೆ ನೀಡಲಾಗಿತ್ತು. ಅಭಿಮಾನ್ ಸ್ಟಡಿಯೋ ಅಭಿವೃದ್ಧಿ ಹೊರತಾಗಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸದಿರಲು ಮಾರಾಟ/ ಪರಭಾರೆ ಕೊಡದಿರಲು ಷರತ್ತು ಸರ್ಕಾರಿ ಆದೇಶದಲ್ಲಿ ಷರತ್ತು ವಿಧಿಸಲಾಗಿತ್ತು. ಉಲ್ಲಂಘನೆಯಾದಲ್ಲಿ ಮಂಜೂರಾತಿ ರದ್ದುಪಡಿಸಿ ಭೂಮಿಯನ್ನು ಸರ್ಕಾರ ಹಿಂಪಡೆಯಲಾಗುವುದು ಎಂದು ನಮೂದಿಸಲಾಗಿತ್ತು. ಈ ವಿಚಾರವನ್ನು ಮನವಿ ಪತ್ರದಲ್ಲಿ ಸೂಚಿಸಿ ಅರಣ್ಯ ಇಲಾಖೆ ಅಧಿಕಾರಿ ಡಿಸಿಗೆ ಪತ್ರ ಬರೆದಿದ್ದಾರೆ.

ಬಾಲಕೃಷ್ಣ ನಿಧನದ ಬಳಿಕ ಅವರ ಮಕ್ಕಳಾದ ಗಣೇಶ್ ಹಾಗೂ ಮೊಮ್ಮಗ ಕಾರ್ತಿಕ್ ಅನಧಿಕೃತವಾಗಿ 10 ಎಕರೆ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ನಮೂದಿಸಲಾಗಿದೆ. ಅಭಿಮಾನ್ ಸ್ಟುಡಿಯೋ ನವೀಕರಣ ಮಾಡುವ ಸಲುವಾಗಿ ಬೇಕಾಗುವ ಹಣಕ್ಕಾಗಿ ಆಸ್ತಿ ಮಾರಾಟಕ್ಕೆ ಅನುಮತಿ ಕೇಳಿ ಮಾರಿದ್ದರು. ಇಲ್ಲಿಯೂ ಉದ್ದೇಶವನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುದಾಗಿ ಪತ್ರದಲ್ಲಿ ಉಲೇಖವಾಗಿದೆ.

Related Posts

Leave a Reply

Your email address will not be published. Required fields are marked *