ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ರನ್ ಚೇಸ್ ಮಾಡಲು ನಿರ್ಧರಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ಹೊನಲು ಬೆಳಕಿನ ಪಂದ್ಯದಲ್ಲಿ ಆರ್ ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಲಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಬೆಂಗಳೂರಿನಲ್ಲಿ ಆರ್ ಸಿಬಿ ವಿರುದ್ಧವೇ ಕಣಕ್ಕಿಳಿಸಲಾಗಿದೆ. ಈ ಮೂಲಕ ರಿಜ್ವಿ ಬದಲು ಫಾಫ್ ಡು ಪ್ಲೆಸಿಸ್ ಆಡುತ್ತಿದ್ದಾರೆ.
ಸ್ಫೋಟಕ ಬ್ಯಾಟಿಂಗ್ ಗೆ ಹೆಸರಾದ ಆರ್ ಸಿಬಿ ತಂಡದಿಂದ ಹೊರಗೆ ಹೋದ ಫಾಫ್ ಡು ಪ್ಲೆಸಿಸ್ ಮತ್ತು ಕನ್ನಡಿಗ ಕೆಎಲ್ ರಾಹುಲ್ ಆರ್ ಸಿಬಿ ವಿರುದ್ಧ ಅಖಾಡಕ್ಕೆ ಇಳಿಯುತ್ತಿದ್ದಾರೆ. ಈ ಮೂಲಕ ತವರಿನ ತಂಡದ ವಿರುದ್ಧ ತವರಿನ ಆಟಗಾರರು ಆಡುತ್ತಿರುವುದರಿಂದ ಕುತೂಹಲ ಕೆರಳಿಸಿದೆ.