Tuesday, December 02, 2025
Menu

ಕಾಂಗ್ರೆಸ್‌ ಮಾಜಿ ಶಾಸಕ ಆರ್‌ವಿ ದೇವರಾಜ್‌ ನಿಧನ

ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​. ವಿ. ದೇವರಾಜ್ ಹೃದಯಾಘಾತದಿಂದ ನಿಧನರಾದರು. ನಾಳೆ (ಡಿಸೆಂಬರ್‌೩) ಜನ್ಮದಿನ ಹಿನ್ನೆಲೆ ಸೋಮವಾರ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

1957ರ ಡಿಸೆಂಬರ್ 3ರಂದು ಆರ್​.ವಿ.ದೇವರಾಜ್ ಜನಿಸಿದ್ದರು. 1989-99ರಲ್ಲಿ ಬೆಂಗಳೂರಿನ ಚಾಮರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದರು. 2000ರಿಂದ ಅಕ್ಟೋಬರ್ 2007ರವರೆಗೆ ಕೆಎಸ್​​ಆರ್​​​ಟಿಸಿ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಎಐಸಿಸಿ ಸದಸ್ಯರಾಗಿದ್ದರು. ಚಾಮರಾಜಪೇಟೆ ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 2016ರಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.

ಆರ್​.ವಿ. ದೇವರಾಜ್ ನೀಧನಕ್ಕೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ ಎಕ್ಸ್​ನಲ್ಲಿ ​ಪೋಸ್ಟ್​ ಮಾಡಿದ್ದು, ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇವರಾಜ್ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *