ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾಗೆ ಕೊರೊನಾ ಪತ್ತೆ

ಗಾಂಧಿನಗರ: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ.

ಶಂಕರ್ ಸಿಂಗ್ ವಘೇಲಾ ಅವರಿಗೆ ತೀವ್ರ ಜ್ವರ ಕಂಡುಬಂದು ಹಿನ್ನಲೆಯಲ್ಲಿ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿತ್ತು.

 

ಇದೀಗ ಅದರ ವರದಿ ಬಂದಿದ್ದು, ಶಂಕರ್ ಸಿಂಗ್ ವಘೇಲಾ ಅವರಿಗೆ ಕೋವಿಡ್ -19 ಸೋಂಕು ದೃಢವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಚಾರ ತಿಳಿಯುತ್ತಲೇ ಪ್ರಧಾನಿ ನರೇಂದ್ರ ಮೋದಿ ಅವರು, ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.

Leave a Reply

Your email address will not be published. Required fields are marked *