ಇಸ್ರೋದ ಮಾಜಿ ಅಧ್ಯಕ್ಷ ಕೃಷ್ಣಸ್ವಾಮಿ ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಡಾ. ಕೆ. ಕಸ್ತೂರಿರಂಗನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮವನ್ನು ಮುನ್ನಡೆಸಿದವರು.
ಇಸ್ರೋದಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಡಾ. ಕಸ್ತೂರಿರಂಗನ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯೋಜನೆಯನ್ನು ಅಭಿವೃದ್ಧಿ ಪಡಿಸುವ ಉಸ್ತುವಾರಿ ವಹಿಸಿದ್ದರು, ಇದು ಧ್ರುವೀಯ ಕಕ್ಷೆಗಳಿಗೆ ಉಪಗ್ರಹಗಳನ್ನು ಉಡಾಯಿಸಲು ವಿಶ್ವಾಸಾರ್ಹ ಕಾರ್ಯಾಚರಣೆ ಸಾಧನವಾಗಿದೆ.
ಅವರು ಭಾರತೀಯ ವಿಜ್ಞಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಂತರರಾಷ್ಟ್ರೀಯ ಖಗೋಳ ಒಕ್ಕೂಟ ಮತ್ತು ಅಂತರರಾಷ್ಟ್ರೀಯ ಅಕಾಡೆಮಿ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ವೈಜ್ಞಾನಿಕ ಮಂಡಳಿಗಳಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ್ದಾರೆ.
.